ADVERTISEMENT

ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸುತ್ತಿದ್ದರೂ ಪ್ರಧಾನಿ ಮೌನವಾಗಿದ್ದಾರೆ: ಖರ್ಗೆ​

ಪಿಟಿಐ
Published 25 ಮೇ 2024, 9:49 IST
Last Updated 25 ಮೇ 2024, 9:49 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

(ಪಿಟಿಐ ಚಿತ್ರ)

ಶಿಮ್ಲಾ: ಚೀನಾ ಭಾರತದ ಭೂಮಿಯನ್ನು ಅತಿಕ್ರಮಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ADVERTISEMENT

ಹಿಮಾಚಲ ಪ್ರದೇಶದ ರೋಹ್ರುದಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಖರ್ಗೆ, 'ನಾವು ಪಾಕಿಸ್ತಾನದ ವಿರುದ್ಧ ಹೋರಾಡಿ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸಿ ಮನೆ ಹಾಗೂ ರಸ್ತೆಗಳನ್ನು ನಿರ್ಮಾಣ ಮಾಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನವಾಗಿದ್ದಾರೆ. 56 ಇಂಚಿನ ಎದೆ ಎಲ್ಲಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷ ದೇಶದ ಜನರನ್ನು ಮತ್ತು ಸಂವಿಧಾನವನ್ನು ಉಳಿಸಲು ಹೋರಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.