ADVERTISEMENT

ವೀಸಾ ಹಗರಣ: ಕಾರ್ತಿ ಚಿದಂಬರಂಗೆ ಜಾಮೀನು

ಪಿಟಿಐ
Published 6 ಜೂನ್ 2024, 15:32 IST
Last Updated 6 ಜೂನ್ 2024, 15:32 IST
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ   

ನವದೆಹಲಿ: ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಂಡಿದ್ದ ವಿಶೇಷ ನ್ಯಾಯಾಲಯ ಕಾರ್ತಿ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಅದರಂತೆ ಕಾರ್ತಿ ಅವರು ನ್ಯಾಯಾಲಯಕ್ಕೆ ಹಾಜರಾದರು.

ಇ.ಡಿ ಮತ್ತು ಸಿಬಿಐ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಆರೋಪಿಗೆ ₹ 1ಲಕ್ಷದ ವೈಯಕ್ತಿಕ ಬಾಂಡ್‌ ಹಾಗೂ ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಜಾಮೀನು ಮಂಜೂರು ಮಾಡಿದರು. 

ADVERTISEMENT

ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಲು ಲಂಚ ಪಡೆದಿದ್ದಾರೆ ಎಂಬ ಆರೋಪ ಇದೆ. ಈ ಕುರಿತ ಹಗರಣದಲ್ಲಿ ಕಾರ್ತಿ ವಿರುದ್ಧ ಇ.ಡಿ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.