ಡೆಹ್ರಾಡೂನ್: ಇಲ್ಲಿನ ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಝಂಜ್ರಾ ಪ್ರದೇಶದ ಖಾಲಿ ಜಾಗದಲ್ಲಿ ಇರಿಸಿದ್ದ ಸಿಲಿಂಡರ್‌ಗಳಿಂದ ಮಂಗಳವಾರ ಬೆಳಿಗ್ಗೆ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ ಸ್ಥಳೀಯರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣೆ (ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಸಿಬ್ಬಂದಿಯೂ ದೌಡಾಯಿಸಿದ್ದಾರೆ.
ಇಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಸಿಲಿಂಡರ್‌ಗಳ ಸುರಕ್ಷಿತ ವಿಲೇವಾರಿಗೆ ಕಾರ್ಯಾಚರಣೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.