ನವದೆಹಲಿ:ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್ ಮಿಷೆಲ್, ಉದ್ಯಮಿ ರಾಜೀವ್ ಸಕ್ಸೆನಾ ಹಾಗೂ 13 ಮಂದಿ ವಿರುದ್ಧ ಸಿಬಿಐ ಪೂರಕ ಆರೋಪಪಟ್ಟಿ ದಾಖಲಿಸಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಗಿದೆ. ಈ ಪ್ರಕರಣದ ವಿಚಾರಣೆ ಇದೇ 21 ರಂದು ನಡೆಯುವ ಸಾಧ್ಯತೆ ಇದೆ.
ಪ್ರಕರಣದ ಸಂಬಂಧ, ಶುಕ್ರವಾರ ಸಲ್ಲಿಸಿದ ತನಿಖಾ ವರದಿಯಲ್ಲಿಭಾರತದ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಹಣ ನೀಡಲು ಮಿಷೆಲ್, ಸಕ್ಸೇನಾ ಮತ್ತು ಇತರರು ವಹಿಸಿದ ಮಾಹಿತಿಯನ್ನು ವಿವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.