ನವದೆಹಲಿ: ಚುನಾವಣಾ ಬಾಂಡ್ ವಿವರಗಳನ್ನು ಮಂಗಳವಾರವೇ ಸಲ್ಲಿಸಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಚುನಾವಣಾ ಬಾಂಡ್ ಪರಿಚಯಿಸಿದ ದಿನದಿಂದ ಈವರೆಗಿನ ಪ್ರಮುಖ ಘಟನಾವಳಿಗಳು ಇಲ್ಲಿವೆ.
2017: ಚುನಾವಣಾ ಬಾಂಡ್ ಯೋಜನೆಯನ್ನು ಹಣಕಾಸು ಮಸೂದೆಯಲ್ಲಿ ಪರಿಚಯಿಸಲಾಯಿತು
2017 ಸೆಪ್ಟೆಂಬರ್ 14: ಈ ಯೋಜನೆಯನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಎಂಬ ಸ್ವಯಂ ಸೇವಾ ಸಂಸ್ಥೆಯಿಂದ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ
2017 ಅಕ್ಟೋಬರ್ 3: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್
2018 ಜನವರಿ 2: ಚುನಾವಣಾ ಬಾಂಡ್ ಯೋಜನೆ ಕುರಿತು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
2022 ನವೆಂಬರ್ 7: ಯಾವುದಾದರೂ ವಿಧಾನಸಭೆಯ ಚುನಾವಣೆ ನಿಗದಿಯಾಗುವ ಸಾಧ್ಯತೆ ಇರುವ ವರ್ಷದಲ್ಲಿ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡುವ ಅವಧಿಯನ್ನು 70 ದಿನಗಳಿಂದ 85 ದಿನಗಳಿಗೆ ಏರಿಕೆ ಮಾಡಿ ಯೋಜನೆಗೆ ತಿದ್ದುಪಡಿ ತರಲಾಯಿತು
2023 ಅಕ್ಟೋಬರ್ 16: ಚುನಾವಣಾ ಬಾಂಡ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠ
2023 ಅಕ್ಟೋಬರ್ 31: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠದಿಂದ ವಿಚಾರಣೆ ಆರಂಭ
2023 ನವೆಂಬರ್ 2: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
2024 ಫೆಬ್ರುವರಿ 15: ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ, ಸರ್ವಾನುಮತದ ತೀರ್ಪು ಪ್ರಕಟ
2024 ಮಾರ್ಚ್ 4: ರಾಜಕೀಯ ಪಕ್ಷಗಳು ಸ್ವೀಕರಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸಲ್ಲಿಸುವ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮೊರೆಹೋದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
2024 ಮಾರ್ಚ್ 7: ಮಾರ್ಚ್ 6ರೊಳಗೆ ಚುನಾವಣಾ ಬಾಂಡ್‌ಗಳ ಮಾಹಿತಿ ಸಲ್ಲಿಸದೆ ನ್ಯಾಯಾಂಗ ನಿಂದನೆ ಮಾಡಿರುವುದಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ
2024 ಮಾರ್ಚ್ 11: ಅವಧಿ ವಿಸ್ತರಣೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸಾಂವಿಧಾನಿಕ ಪೀಠ
ಜೂನ್ 30ರ ವರೆಗೆ ಸಮಯಾವಕಾಶ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿ ವಜಾ
ಆದೇಶ ಪಾಲಿಸದಿದ್ದರೆ ಕಾನೂನು ಕ್ರಮದ ಪ್ರಕ್ರಿಯೆ ಆರಂಭ: ಪೀಠ ಎಚ್ಚರಿಕೆ
ಮಾರ್ಚ್ 15ರ ಸಂಜೆ 5ರ ಒಳಗಾಗಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿರಬೇಕು: ‘ಸುಪ್ರೀಂ’ ಆದೇಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.