ಪಟನಾ: ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆಸಮ್ಮತವಿಲ್ಲಎಂಬ ಸೂಚನೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ.
ಎನ್‌ಆರ್‌ಸಿವಿಚಾರವಾಗಿ ಬಿಹಾರದಲ್ಲಿ ಅಲ್ಪಸಂಖ್ಯಾತರು ಚಿಂತೆಪಡುವ ಅವಶ್ಯಕತೆ ಇಲ್ಲ ಎಂದು ಗುರುವಾರ ನಿತೀಶ್ ಕುಮಾರ್ ಹೇಳಿದ್ದರು. ಇಂದು ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭ ಪತ್ರಕರ್ತರೊಬ್ಬರು ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿ ಬಗ್ಗೆ ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿರುವ ನಿತೀಶ್ ಕುಮಾರ್ ‘ಎನ್‌ಆರ್‌ಸಿ ಬಿಹಾರದಲ್ಲಿ ಏಕೆ ಜಾರಿಯಾಗುತ್ತದೆ?’ಎಂದು ಮರು ಪ್ರಶ್ನೆ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಎನ್‌ಡಿಎ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳಪೈಕಿ ಎನ್‌ಆರ್‌ಸಿ ವಿರೋಧಿಸುತ್ತಿರುವವರಲ್ಲಿ ನಿತೀಶ್ ಕುಮಾರ್ ಮೊದಲಿಗರಾಗಿದ್ದಾರೆ. ಜೆಡಿಯು ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದ್ದು, ನಿತೀಶ್ ನಡೆಯಿಂದ ಕೇಂದ್ರ ಸರ್ಕಾರಕ್ಕೆ ಹಿನ್ನೆಡೆ ಉಂಟಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.