ನವದೆಹಲಿ: ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವನ್ನು ರಚಿಸಿದ್ದು, ಏಪ್ರಿಲ್ 18ರಂದು ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್. ರವೀಂದ್ರ ಭಟ್, ಹಿಮಾ ಕೊಯ್ಲಿ ಮತ್ತು ಪಿ.ಎಸ್. ನರಸಿಂಹ ಅವರೂ ಈ ಪೀಠದಲ್ಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ.
ಸುಪ್ರಿಯೊ ಅಲಿಯಾಸ್ ಸುಪ್ರಿಯಾ ಚಕ್ರವರ್ತಿ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವ ವೇಳೆ ನ್ಯಾಯಾಲಯ ಕಲಾಪದ ನೇರ ಪ್ರಸಾರ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರವು ಈ ಅರ್ಜಿಗಳಿಗೆ ವಿರೋಧ ವ್ಯಕ್ತಪಡಿಸಿದ್ದು, ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಿದರೆ ಸ್ವೀಕೃತ ಸಾಮಾಜಿಕ ಮೌಲ್ಯಗಳಿಗೆ ಧಕ್ಕೆಯುಂಟಾಗಲಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.