ADVERTISEMENT

ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಆಗಿ ಎನ್.ವಿ.ರಮಣ ಅವರ ಹೆಸರು ಶಿಫಾರಸು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 9:07 IST
Last Updated 24 ಮಾರ್ಚ್ 2021, 9:07 IST
ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ
ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ   

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಹೆಸರನ್ನು ಶಿಫಾರಸು ಮಾಡಿ ಸಿಜೆಐ ಎಸ್‌.ಎ. ಬೊಬ್ಡೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರದಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಿಜೆಐ ಎಸ್‌.ಎ. ಬೊಬ್ಡೆ ಏಪ್ರಿಲ್ 23 ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ಶಿಫಾರಸು ಮಾಡಲಾಗಿದೆ.

ನಿವೃತ್ತಿ ಹಂತದಲ್ಲಿರುವ ಮುಖ್ಯ ನ್ಯಾಯಮೂರ್ತಿಗಳಿಂದ ನೂತನ ಸಿಜೆಐ ಆಯ್ಕೆಗೆ ಕಾನೂನು ಸಚಿವರು ಸೂಕ್ತ ಸಮಯದಲ್ಲಿ ಶಿಫಾರಸನ್ನು ಪಡೆಯುತ್ತಾರೆ. ಈ ನಿಯಮಾವಳಿ ಅನ್ವಯ ನಿವೃತ್ತಿ ಅಂಚಿನಲ್ಲಿರುವ ಸಿಜೆಐ ಎಸ್.ಎ. ಬೊಬ್ಡೆ ಅವರು ಎನ್.ವಿ. ರಮಣ ಹೆಸರನ್ನು ಶಿಫಾರಸು ಮಾಡಿದ್ದಾರೆ.

ADVERTISEMENT

ಆಗಸ್ಟ್ 27, 1957 ರಂದು ಜನಿಸಿರುವ ನ್ಯಾಯಮೂರ್ತಿ ಎನ್.ವಿ. ರಮಣ ಅವರ ಅಧಿಕಾರಾವಧಿ 2022 ರ ಆಗಸ್ಟ್ 26 ರವರೆಗೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.