ನವದೆಹಲಿ: ದೆಹಲಿ ರಿಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಕಡಿಯಲಾಗುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಸೋಮವಾರ ಹಿಂದೆ ಸರಿದಿದ್ದಾರೆ.
‘ನಾನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಲ್‌ಎಸ್‌ಎ) ಅಧ್ಯಕ್ಷನಾಗಿದ್ದಾಗ ಪಟ್ನಾಕ್ಕೆ ಭೇಟಿ ನೀಡಿದ್ದೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜೊತೆ ಅಲ್ಲಿನ ಜೈಲುಗಳಿಗೆ ಭೇಟಿ ನೀಡಿದ್ದೆ. ಹೀಗಾಗಿ ನಾನು ಈ ಅರ್ಜಿಯ ವಿಚಾರಣೆ ನಡೆಸುವುದು ಸೂಕ್ತವಾಗುವುದಿಲ್ಲ’ ಎಂದು ಸಿಜೆಐ ಹೇಳಿದರು. ಸಿಜೆಐ ಅವರು ಇಲ್ಲದ ಪೀಠದ ಮುಂದೆ ಈ ಅರ್ಜಿಗಳು ವಿಚಾರಣೆಗೆ ಬರಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.