ಪಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಶಾಲೆಯೊಂದರ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಯೊಬ್ಬನನ್ನು ಸ್ನೇಹಿತರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ತುರ್ಕಿ ಹೈಸ್ಕೂಲ್‌ನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವಿನ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ 11ನೇ ತರಗತಿ ವಿದ್ಯಾರ್ಥಿ ಸೌರಭ್ ಕುಮಾರ್‌ನನ್ನು ಹತ್ಯೆ ಮಾಡಲಾಗಿದೆ’ ಎಂದು ಮುಜಾಫರ್‌ಪುರ ಗ್ರಾಮಾಂತರ ಎಸ್‌ಪಿ ವಿದ್ಯಾಸಾಗರ್ ತಿಳಿಸಿದ್ದಾರೆ.
‘ಸೌರಭ್ ಕುಮಾರ್ ಒಂದು ಗುಂಪಿನಲ್ಲಿ ಗುರುತಿಸಿಕೊಂಡಿದ್ದ. ಇನ್ನೊಂದು ಗುಂಪಿನಲ್ಲಿದ್ದ ಆರೋಪಿಗಳು ಸೌರಭ್ ತಲೆಗೆ ಕೋಲಿನಿಂದ ಬಲವಾಗಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ’ ಎಂದು ವಿದ್ಯಾಸಾಗರ್ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.