ಖಾರ್ಗೋನ್, ಮಧ್ಯಪ್ರದೇಶ: ಶಾಲಾ ಆವರಣದಲ್ಲಿ ಮೊಬೈಲ್ ಬಳಸದಂತೆ ಹೇಳಿದ್ದಕ್ಕೆ ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ಸಿಟ್ಟಾಗಿದ್ದ 12 ನೇ ತರಗತಿಯ ವಿದ್ಯಾರ್ಥಿಯೊಬ್ಬ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.
ಖಾರ್ಗೋನ್ ಜಿಲ್ಲೆಯ ಗುಲ್ವಾಡ್‌ನ ಸರ್ಕಾರಿ ಸೆಕೆಂಡೆರಿ ಶಾಲೆಯ ವಿದ್ಯಾರ್ಥಿ ರಾಜ್ ಅನ್ಸಾರಿ (17) ಮೃತನಾಗಿದ್ದಾನೆ.
ಗುಲ್ವಾಡ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಓದುತ್ತಿದ್ದ ವಿದ್ಯಾರ್ಥಿ ರಾಜ್, ಬುಧವಾರ ತನ್ನ ಸ್ಮಾರ್ಟ್‌ಫೋನ್ ಅನ್ನು ಶಾಲೆಗೆ ತೆಗೆದುಕೊಂಡು ಬಂದು ಸೆಲ್ಪಿ ತೆಗೆದುಕೊಳ್ಳುತ್ತಿದ್ದ. ಈ ರೀತಿ ಮಾಡದಂತೆ ಶಿಕ್ಷಕರು ಬುದ್ಧವಾದ ಹೇಳಿದ್ದರು.
ಇದರಿಂದ ಕುಪಿತನಾಗಿದ್ದ ವಿದ್ಯಾರ್ಥಿ ಜಾಮ್ ಗೇಟ್ ಎಂಬ ಐತಿಹಾಸಿಕ ಸ್ಥಳದ ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬದುಕುಳಿಯಲಿಲ್ಲ ಎಂದು ಖಾರ್ಗೋನ್ ಎಸ್‌ಪಿ ಧರ್ಮರಾಜ್ ಮೀನಾ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.