ಮುಂಬೈ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿವರೆಗೆ ವಾರ್ಷಿಕ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 9 ಮತ್ತು 11ನೇ ತರಗತಿ ಕುರಿತು ನಂತರ ತೀರ್ಮಾನಿಸಲಾಗುತ್ತದೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. 10 ಮತ್ತು 12ನೇ ತರಗತಿಯ ಮುಖ್ಯ ಪರೀಕ್ಷೆಗಳು ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿದ್ದು, ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿವೆ ಎಂದು ಶಿಕ್ಷಣ ಸಚಿವರಾದ ವರ್ಷಾ ಗಾಯಕ್ವಾಡ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.