ADVERTISEMENT

ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ಪರಿಗಣನೆಯ ಹಂತದಲ್ಲಿದೆ: ಸಂಸ್ಕೃತಿ ಖಾತೆ ಸಚಿವ

ಪಿಟಿಐ
Published 9 ಆಗಸ್ಟ್ 2021, 10:17 IST
Last Updated 9 ಆಗಸ್ಟ್ 2021, 10:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾವ ಪರಿಗಣನೆಯಲ್ಲಿದೆ ಎಂದು ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್‌ಮೇಘ್ವಾಲ್‌ ಲೋಕಸಭೆಗೆ ತಿಳಿಸಿದರು.

ಲೋಕಸಭೆಯಲ್ಲಿ ಸೋಮವಾರ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿಯವರ ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಕುರಿತು ಚರ್ಚಿಸಲು 8 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

‘ಇಲ್ಲಿಯವರೆಗೆ ತಮಿಳು, ತೆಲುಗು, ಸಂಸ್ಕೃತ, ಕನ್ನಡ, ಮಲಯಾಳ ಮತ್ತು ಒಡಿಯಾ ಭಾಷೆಗಳಿಗೆ ಶಾಸ್ತ್ರೀಯ ಭಾಷೆಗಳ ಸ್ಥಾನಮಾನ ನೀಡಲಾಗಿದೆ. ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವುದು ಪರಿಗಣನೆಯ ಹಂತದಲ್ಲಿದೆ. ಈ ಬಗ್ಗೆ ಸರ್ಕಾರವು ಸಕಾರಾತ್ಮಕ ಮನೋಭಾವ ಹೊಂದಿದೆ‘ ಎಂದು ಉತ್ತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.