ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ರಾಮಪುರ ಉಪವಿಭಾಗದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಈ ಪ್ರದೇಶದಲ್ಲಿನ ರಸ್ತೆಗಳು ಕೊಚ್ಚಿಹೋಗಿದ್ದು, ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಪಿಟಿಐಗೆ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಇಂಡೋ–ಟಿಬೆಟನ್ ಗಡಿ ಪೊಲೀಸ್, ಪೊಲೀಸರು ಮತ್ತು ಗೃಹ ರಕ್ಷಕ ದಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಕಾಣೆಯಾದ ಜನರ ಪತ್ತೆಗೆ ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದೂ ಡಿಸಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.