ADVERTISEMENT

ಸಿ.ಎಂ ಯೋಗಿಗೆ ಬೆದರಿಕೆ ಹಾಕಿದ್ದ ಆರೋಪಿ ಗುರುತು ಪತ್ತೆ

ಪಿಟಿಐ
Published 5 ನವೆಂಬರ್ 2024, 16:28 IST
Last Updated 5 ನವೆಂಬರ್ 2024, 16:28 IST
<div class="paragraphs"><p>ಯೋಗಿ ಆದಿತ್ಯನಾಥ</p></div>

ಯೋಗಿ ಆದಿತ್ಯನಾಥ

   

ಪಿಟಿಐ

ಗೋರಖ್‌ಪುರ (ಉತ್ತರಪ್ರದೇಶ): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಿ ಪೋಸ್ಟ್‌ ಮಾಡಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ADVERTISEMENT

ಗೋರಖ್‌ಪುರದ ನಿವಾಸಿ ರಿಯಾಜ್‌ ಉಲ್‌ ಹಕ್‌ ಅನ್ಸಾರಿ ಎಂಬಾತ ಇನ್‌ಸ್ಟಾಗ್ರಾಮ್‌ನಲ್ಲಿ ಸೈಫ್‌ ಅನ್ಸಾರಿ ಎನ್ನುವ ಮತ್ತೊಂದು ಹೆಸರಿನಲ್ಲಿ ಕೊಲೆ ಬೆದರಿಕೆ ಹಾಕಿರುವುದನ್ನು ಪತ್ತೆಹಚ್ಚಲಾಗಿದೆ. ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

‘ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.  ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಶಂಕಿತ ವ್ಯಕ್ತಿಯ ಸಾಮಾಜಿಕ ಮಾಧ್ಯಮ ಚಟುವಟಿಕೆಯನ್ನು ಪತ್ತೆಹಚ್ಚಲು ಸೈಬರ್ ಸೆಲ್‌ಗೆ ಸೂಚಿಸಲಾಗಿದೆ’ ಎಂದು ಗೋರಖ್‌ಪುರದ ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಿನವ್ ತ್ಯಾಗಿ ಮಂಗಳವಾರ ತಿಳಿಸಿದ್ದಾರೆ. 

‘ವಾಯ್ಸ್ ಆಫ್ ಹಿಂದೂಸ್’ ಸಂಘಟನೆಯು, ಇನ್‌ಸ್ಟಾಗ್ರಾಮ್‌ನಲ್ಲಿದ್ದ ಕೊಲೆ ಬೆದರಿಕೆ ಸಂದೇಶದ ಸ್ಕ್ರೀನ್‌ಶಾಟ್ ತೆಗೆದು, ಗೋರಖ್‌ಪುರ ಪೊಲೀಸರಿಗೆ ಸೋಮವಾರ ಸಂಜೆ ರವಾನಿಸಿ, ದೂರು ದಾಖಲಿಸಿತ್ತು.  

ಆದಿತ್ಯನಾಥ್‌ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಈಗಾಗಲೇ 24 ವರ್ಷದ ಯುವತಿ ಫಾತಿಮಾ ಖಾನ್ ಎಂಬುವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.