ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್, ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ ಸೇರಿದಂತೆ ಹಲವು ನಾಯಕರು ಇಂದು (ಗುರುವಾರ) ನಾಮಪತ್ರ ಸಲ್ಲಿಸಿದ್ದಾರೆ.
ಬರ್ಹೈತ್ ಕ್ಷೇತ್ರದಿಂದ ಸಿಎಂ ಸೊರೇನ್, ಗಾಂಡೇಯ್ ವಿಧಾನಸಭಾ ಕ್ಷೇತ್ರದಿಂದ ಅವರ ಪತ್ನಿ ಕಲ್ಪನಾ ಸೊರೇನ್ ನಾಮಪತ್ರ ಸಲ್ಲಿಸಿದ್ದಾರೆ.
2019ರ ವಿಧಾನಸಭಾ ಚುನಾವಣೆಯಲ್ಲಿ, ಸೊರೇನ್ ಸಂತಾಲ ಪ್ರದೇಶದ ಬರ್ಹೈತ್ ಮತ್ತು ದುಮ್ಕಾ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರು. ಎರಡೂ ಸ್ಥಾನಗಳಲ್ಲಿ ಗೆದ್ದಿದ್ದರು.
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲಾದ ಚಂದಂಕಿಯರಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕ ಹಾಗೂ ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ ನಾಮಪತ್ರ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಜಾರ್ಖಂಡ್‌ನ ಜನ ಭ್ರಷ್ಟ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರವನ್ನು ಕಿತ್ತೊಗೆಯಲು ನಿರ್ಧರಿಸಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಜೆಎಂಎಂ ನಾಯಕರಲ್ಲದೇ, ಬಿಜೆಪಿ ಮತ್ತು ಕಾಂಗ್ರೆಸ್‌ನ 50ಕ್ಕೂ ಹೆಚ್ಚು ನಾಯಕರು ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನ ಸಚಿವರಾದ ರಾಮೇಶ್ವರ್ ಓರಾನ್, ಇರ್ಫಾನ್ ಅನ್ಸಾರಿ, ದೀಪಿಕಾ ಪಾಂಡೆ ಸಿಂಗ್ ಮತ್ತು ಬನ್ನಾ ಗುಪ್ತಾ ಸೇರಿದಂತೆ ಇತರ ಪ್ರಮುಖ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.