ಕಟಕ್: ಒಡಿಶಾದ ಕಟಕ್ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮತ್ತು ಆಶ್ಲೀಲ ವಿಡಿಯೊ ಮಾಡಿದ ಆರೋಪದಡಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ತನ್ನ ಪ್ರಿಯಕರ ಸೇರಿದಂತೆ ಆರು ಮಂದಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿದ್ಯಾರ್ಥಿನಿಯು ಬಾದಾಂಬಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
‘ದಸರಾ ಹಬ್ಬದ ಸಂದರ್ಭದಲ್ಲಿ ಸಂತ್ರಸ್ತೆಯು ಹುಟ್ಟುಹಬ್ಬ ಆಚರಿಸಿಕೊಳ್ಳಲು ಕೆಫೆಯೊಂದಕ್ಕೆ ಹೋಗಿದ್ದರು. ಈ ವೇಳೆ ಆಕೆಯ ಪ್ರಿಯಕರ ಕೆಫೆ ಮಾಲಿಕನ ಸಹಾಯದಿಂದ ಮೊಬೈಲ್‌ನಲ್ಲಿ ಆಶ್ಲೀಲ ದೃಶ್ಯಗಳನ್ನು ಸೆರೆ ಹಿಡಿದಿದ್ದರು. ಬಳಿಕ ಆಕೆಯ ವಿಡಿಯೊವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವತಿಯು ನೀಡಿದ ದೂರಿನ ಆಧಾರದಲ್ಲಿ ಆಕೆಯ ಪ್ರಿಯಕರ, ಕೆಫೆ ಮಾಲಿಕ, ಒಬ್ಬ ಅಪ್ರಾಪ್ತ ಬಾಲಕ ಮತ್ತು ಮೂವರನ್ನು ಬಂಧಿಸಲಾಗಿದೆ. ಆರೋಪಿಗಳ ಮೊಬೈಲ್‌ನಿಂದ ವಿಡಿಯೊಗಳನ್ನು ಸಂಗ್ರಹಿಸಿ, ಮೊಬೈಲ್‌ಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.