ADVERTISEMENT

ಮಹಾರಾಷ್ಟ್ರದಲ್ಲಿ ಸಿದ್ದಿಕಿ ಹತ್ಯೆ: ಹದಗೆಟ್ಟ ಕಾನೂನು–ಸುವ್ಯವಸ್ಥೆ; ರಾಹುಲ್ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2024, 5:41 IST
Last Updated 13 ಅಕ್ಟೋಬರ್ 2024, 5:41 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

– ಪಿಟಿಐ ಚಿತ್ರ

ನವದೆಹಲಿ: ಅಜಿತ್ ಪವಾರ್ ಬಣದ (ಎನ್‌ಸಿಪಿ) ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ (66) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ADVERTISEMENT

ಈ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಹೊಣೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. 

ಬಾಬಾ ಸಿದ್ದಿಕಿ ಅವರ ದುರ್ಮರಣ ಆಘಾತಕಾರಿ ಮತ್ತು ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ನಾನು ಅವರ ಕುಟುಂಬದೊಂದಿಗೆ ಇರುವೆ ಎಂದು ರಾಹುಲ್‌ ಗಾಂಧಿ ಸಂತಾಪ ವ್ಯಪ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಬಾಂದ್ರಾದ ನಿರ್ಮಲ್ ನಗರದಲ್ಲಿ ಅವರ ಪುತ್ರನ ಕಚೇರಿ ಸಮೀಪ ಸಿದ್ದಿಕಿ ಮೇಲೆ ಶನಿವಾರ ರಾತ್ರಿ ಗುಂಡಿನ ದಾಳಿ ನಡೆದಿತ್ತು. ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಗುಂಡಿನ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.