ADVERTISEMENT

ಮತ್ತೊಮ್ಮೆ ಪಾರದರ್ಶಕವಾಗಿ NEET-UG ಪರೀಕ್ಷೆ ನಡೆಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪಿಟಿಐ
Published 6 ಜುಲೈ 2024, 11:17 IST
Last Updated 6 ಜುಲೈ 2024, 11:17 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಇರುವ ನೀಟ್-ಯುಜಿ ಪರೀಕ್ಷೆಯನ್ನು ಮತ್ತೊಮ್ಮೆ ಪಾರದರ್ಶಕವಾಗಿ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಮೋದಿ ಸರ್ಕಾರ ತನ್ನ ದುಷ್ಕೃತ್ಯಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಕೂಲಂಕುಷವಾಗಿ ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದ್ದಾರೆ.

'ನೀಟ್-ಯುಜಿ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಆದರೆ ಶಿಕ್ಷಣ ಸಚಿವಾಲಯವೇ ಕೆಲವು ಸ್ಥಳಗಳಲ್ಲಿ ಮಾತ್ರ ಅಕ್ರಮಗಳು ನಡೆದಿವೆ ಎಂದು ಹೇಳಿದೆ. ಇದು ದಾರಿ ತಪ್ಪಿಸುವ ಪ್ರಯತ್ನ' ಎಂದು ಹೇಳಿದ್ದಾರೆ.

ADVERTISEMENT

'ಈ ಹಸಿ ಸುಳ್ಳನ್ನು ಲಕ್ಷಾಂತರ ಯುವಕರಿಗೆ ಹೇಳಲಾಗುತ್ತಿದೆ. ಇದರಿಂದ ಅವರ ಭವಿಷ್ಯ ಹಾಳಾಗುತ್ತಿದೆ. ಬಿಜೆಪಿ, ಆರ್‌ಎಸ್‌ಎಸ್ ಶಿಕ್ಷಣ ಮಾಫಿಯಾಕ್ಕೆ ಉತ್ತೇಜನ ನೀಡಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ಕೈವಶ ಮಾಡಿಕೊಂಡಿದೆ. ಎನ್‌ಸಿಇಆರ್‌ಟಿ ಪುಸ್ತಕ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಪ್ರಕರಣಗಳಿಂದ ಮೋದಿ ಸರ್ಕಾರ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಮುಂದಾಗಿದೆ' ಎಂದು ಖರ್ಗೆ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.