ADVERTISEMENT

ಸಿದ್ದಿಕಿ ಕೊಲೆ: ಸಮಗ್ರ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಪಿಟಿಐ
Published 13 ಅಕ್ಟೋಬರ್ 2024, 13:57 IST
Last Updated 13 ಅಕ್ಟೋಬರ್ 2024, 13:57 IST
<div class="paragraphs"><p>ಕಾಂಗ್ರೆಸ್‌</p></div>

ಕಾಂಗ್ರೆಸ್‌

   

ನವದೆಹಲಿ: ಎನ್‌ಸಿಪಿ ನಾಯಕ ಬಾಬಾ ಸಿದ್ಧಿಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

‘ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯದ ನೈತಿಕ ಹೊಣೆ ಹೊತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಗೃಹ ಸಚಿವ ದೇವೇಂದ್ರ ಫಡಣವೀಸ್‌ ಅವರು ರಾಜೀನಾಮೆ ನೀಡಬೇಕು’ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ADVERTISEMENT

ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ಗುಂಡಿಕ್ಕಿ ಕೊಂದಿದ್ದರು.

ಮಹಾರಾಷ್ಟ್ರದ ಮಹಾಯುತಿ ಸರ್ಕಾರ ತಮ್ಮದೇ ನಾಯಕರಿಗೆ ಮತ್ತು ಭಯಭೀತರಾಗಿರುವ ಮುಂಬೈನ ಜನರಿಗೆ ರಕ್ಷಣೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

‘ಇಂತಹ ಕೃತ್ಯಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ತೋರಿಸುತ್ತವೆ. ಈ ಘಟನೆಯ ಮೂಲಕ ಹೇಗಾದರೂ ಚುನಾವಣೆ ದಿನಾಂಕವನ್ನು ಮುಂದೂಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ಹೇಳಿದೆ.

‘ಘಟನೆ ಕುರಿತು ಮಹಾರಾಷ್ಟ್ರ ಸರ್ಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.