ADVERTISEMENT

ಲೋಕಸಭಾ ಚುನಾವಣೆ 2024: ಮೈತ್ರಿ ಚರ್ಚೆಗೆ ಸಮಿತಿ ರಚಿಸಿದ ಕಾಂಗ್ರೆಸ್

ಪಿಟಿಐ
Published 19 ಡಿಸೆಂಬರ್ 2023, 9:52 IST
Last Updated 19 ಡಿಸೆಂಬರ್ 2023, 9:52 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಲು ಐದು ಸದಸ್ಯರ ಸಮಿತಿಯನ್ನು ಕಾಂಗ್ರೆಸ್ ಮಂಗಳವಾರ ರಚಿಸಿದೆ.

ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರು ಇದರ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ, ಸಲ್ಮಾನ್ ಖುರ್ಷೀದ್ ಮತ್ತು ಮೋಹನ್ ಪ್ರಕಾಶ್ ಈ ಸಮಿತಿಯಲ್ಲಿರುವ ಇತರ ಸದಸ್ಯರು.

ADVERTISEMENT

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷದ ರಾಷ್ಟ್ರಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣಕ್ಕೆ ಜಾರಿಗೆ ಬರುವಂತೆ ರಾಷ್ಟ್ರೀಯ ಮೈತ್ರಿ ಸಮಿತಿಯನ್ನು ರಚಿಸಿದ್ದಾರೆ. ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಷಯವನ್ನು ಈ ಸಮಿತಿಯು ಎಲ್ಲಾ ಆಯಾಮಗಳಿಂದ ಚರ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.