ಲಖನೌ: ಬಜರಂಗ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವುದನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬೆಂಬಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ‘ದ್ವೇಷ ಹರಡುವ ಮತ್ತು ಕೋಮು ಸೌಹಾರ್ದವನ್ನು ಕದಡುವ ಸಂಘಟನೆಗಳು ನಿಷೇಧವಾಗಬೇಕು. ಅಂಥ ಸಂಘಟನೆಗಳಿಗೆ ದೇಶದಲ್ಲಿ ಜಾಗ ಇಲ್ಲ’ ಎಂದು ಬಜರಂಗ ದಳದ ಹೆಸರನ್ನು ಉಲ್ಲೇಖಿಸದೆ ಹೇಳಿದರು.
ವಲ್ಲಭ ಭಾಯಿ ಪಟೇಲ್ ಅವರು ಗೃಹ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್) ನಿಷೇಧಿಸಿದ್ದರು ಎಂದೂ ತಿಳಿಸಿದರು.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗ ದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.