ADVERTISEMENT

ಸಿಬಿಐ ತನಿಖೆಗಿದ್ದ ಮುಕ್ತ ಅನುಮತಿ ವಾಪಸ್‌: ರಾಜ್ಯದ ನಿರ್ಧಾರಕ್ಕೆ ಖರ್ಗೆ ಬೆಂಬಲ

ಪಿಟಿಐ
Published 27 ಸೆಪ್ಟೆಂಬರ್ 2024, 10:45 IST
Last Updated 27 ಸೆಪ್ಟೆಂಬರ್ 2024, 10:45 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಬೆಂಗಳೂರು: ಸಿಬಿಐ ತನಿಖೆಗೆ ನೀಡಲಾಗಿದ್ದ ಮುಕ್ತ ಅನುಮತಿಯನ್ನು ಹಿಂದಕ್ಕೆ ಪಡೆದ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಿಬಿಐ ಪೂರ್ವಗ್ರಹದಿಂದ ಕಾರ್ಯನಿರ್ವಹಿಸುತ್ತಿರುವುದು ದೃಢಪಟ್ಟಿದೆ. ಆದ್ದರಿಂದ ಸಿಬಿಐಗೆ ಮುಕ್ತ ಅವಕಾಶ ನೀಡಬಾರದು ಎಂದು ಸಂಪುಟ ಸಭೆಯಲ್ಲಿ ಗುರುವಾರ ತೀರ್ಮಾನಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, 'ಸಿಬಿಐ ತನಿಖೆಗೆ ನೀಡಿದ್ದ ಮುಕ್ತ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದು ಇದೇ ಮೊದಲಲ್ಲ. ದೇವರಾಜ ಅರಸು ಅವರು ಸಿಎಂ ಆಗಿದ್ದಾಗ ಹೀಗೆ ಮಾಡಲಾಗಿತ್ತು. ಆದ್ದರಿಂದ ಇದು ಸಾಮಾನ್ಯ ವಿಚಾರ' ಎಂದು ಹೇಳಿದ್ದಾರೆ.

ADVERTISEMENT

'ನಾನು ಗೃಹ ಸಚಿವನಾಗಿದ್ದಾಗ ವೀರಪ್ಪನ್ ಪ್ರಕರಣ, ಸ್ಟಾಂಪ್ ಪೇಪರ್ ಮಾರಾಟಗಾರ ತೆಲಗಿ (ಅಬ್ದುಲ್ ಕರೀಂ ತೆಲಗಿ) ಸೇರಿ ಒಟ್ಟು ಮೂರು ಪ್ರಕರಣಗಳ ತನಿಖೆಗೆ ಸಿಬಿಐಗೆ ಶಿಫಾರಸು ಮಾಡಲಾಗಿತ್ತು. ಆದರೆ ಅವರು ತನಿಖೆ ಮಾಡಲಿಲ್ಲ. ವೀರಪ್ಪನ್ ನೂರಾರು ಜನರನ್ನು ಕೊಂದ. ತೆಲಗಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿ ಸರ್ಕಾರಕ್ಕೆ ನಷ್ಟ ಮಾಡಿದ. ಇಂತಹ ಪ್ರಮುಖ ಪ್ರಕರಣಗಳನ್ನು ಸಿಬಿಐ ತನಿಖೆ ಮಾಡಲಿಲ್ಲ' ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ (ಕರ್ನಾಟಕ) ಸಿಬಿಐ ತನಿಖೆಗೆ ನೀಡಲಾಗಿದ್ದ ಮುಕ್ತ ಅನುಮತಿಯನ್ನು ಹಿಂದಕ್ಕೆ ಪಡೆಯಲಾಗಿದೆ. ಇನ್ನುಮುಂದೆ ಯಾವುದೇ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕಾದರೂ ಸಿಬಿಐ, ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಗುರುವಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.