ADVERTISEMENT

ಜಮ್ಮು & ಕಾಶ್ಮೀರ: ಜಮ್ಮುವಿನ ಪಕ್ಷೇತರ ಶಾಸಕನಿಗೆ ಒಲಿದ ಸಚಿವ ಸ್ಥಾನದ ಭಾಗ್ಯ

ಪಿಟಿಐ
Published 17 ಅಕ್ಟೋಬರ್ 2024, 3:12 IST
Last Updated 17 ಅಕ್ಟೋಬರ್ 2024, 3:12 IST
<div class="paragraphs"><p>&nbsp;ಜಮ್ಮು ಮತ್ತು ಕಾಶ್ಮೀರ&nbsp;ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ  ಪ್ರಮಾಣ ವಚನ ಸ್ವೀಕರಿಸಿದರು.</p></div>

 ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದರು.

   

ಶ್ರೀನಗರ: ಜಮ್ಮು ಪ್ರದೇಶದ ಚಾಂಬ್ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಸತೀಶ್ ಶರ್ಮಾ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಈ ಮೂಲಕ ಜಮ್ಮು ಭಾಗದ ಏಕೈಕ ಸಚಿವರಾಗಿದ್ದಾರೆ. 

ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಸತೀಶ್ ಶರ್ಮಾ ಅವರಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನಿರಾಕರಿಸಿತು. ಇದರಿಂದ ಬಂಡಾಯವೆದ್ದು ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಜಯ ಸಾಧಿಸಿದ್ದರು. ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರಾಜೀವ್ ಶರ್ಮಾ ಅವರನ್ನು 7,000 ಮತಗಳಿಂದ ಸೋಲಿಸಿದ್ದರು. ಆದರೆ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲಿ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದರು.

ಜಮ್ಮು ಪ್ರದೇಶದಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಶರ್ಮಾ ಏಕೈಕ ಬಿಜೆಪಿಯೇತರ ಸದಸ್ಯರಾಗಿದ್ದು, ಸರ್ಕಾರದ ಭಾಗವಾಗಿದ್ದಾರೆ.

ನಿನ್ನೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಶರ್ಮಾ, ಜಮ್ಮು ಭಾಗಕ್ಕೆ ಸಚಿವ ಸ್ಥಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದರು.

‘ನನಗೆ ಮಾತಾ ರಾಣಿ ಆಶೀರ್ವಾದ ನೀಡಿದ್ದಾರೆ. ಜನರಿಗೆ ಮತ್ತು ಓಮರ್ ಅಬ್ದುಲ್ಲಾ ಜೀ ಅವರಿಗೆ ಧನ್ಯವಾದಗಳು, ಜಮ್ಮು ಪ್ರದೇಶಕ್ಕೆ ನಿರೀಕ್ಷೆಗಿಂತ ಹೆಚ್ಚು ಕೆಲಸ ಮಾಡುವುದಾಗಿ ಶರ್ಮಾ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.