ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
50 ಮಹಿಳೆಯರನ್ನು ಒಳಗೊಂಡ 125 ಅಭ್ಯರ್ಥಿಗಳ ಮೊದಲ ಪಟ್ಟಿಯ ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿದರು.
ಆನ್‌ಲೈನ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, 'ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಶೇಕಡಾ 40 ರಷ್ಟು ಮಹಿಳೆಯರು ಮತ್ತು ಶೇಕಡಾ 40 ರಷ್ಟು ಯುವಕರಾಗಿದ್ದಾರೆ. ಈ ಮೂಲಕ ಪಕ್ಷವು ಐತಿಹಾಸಿಕ ಹೆಜ್ಜೆ ಇಡುತ್ತಿದೆ,’ ಎಂದು ಹೇಳಿದರು.
ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರನ್ನು ಉನ್ನಾವೊ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸುವುದಾಗಿಯೂ ಪ್ರಿಯಾಂಕಾ ಘೋಷಣೆ ಮಾಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಉನ್ನಾವೋದಲ್ಲಿ ಯಾರ ಮಗಳಿಗೆ ಬಿಜೆಪಿ ಅನ್ಯಾಯ ಮಾಡಿತೋ, ಅವರೇ ಈಗ ನ್ಯಾಯದ ಮುಂದಾಳುವಾಗಿದ್ದಾರೆ. 2022ರ ಚುನಾವಣೆಯಲ್ಲಿ ಅವರು ಹೋರಾಡಿ ಗೆಲ್ಲುತ್ತಾರೆ,’ ಎಂದು ತಿಳಿಸಿದ್ದಾರೆ.
‘ಆಶಾ ಸಿಂಗ್ ಅವರ ಹೋರಾಟವನ್ನು ಮುಂದುವರೆಸಿ, ಅವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಕಾಂಗ್ರೆಸ್ ಬಯಸುತ್ತದೆ,’ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಇವುಗಳನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.