ಇಂಫಾಲ್: ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ ವಾಸ್ತವ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಜೈರಾಮ್ ರಮೇಶ್, ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದಾರೆ.
‘ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾಗಿ ಏಳು ತಿಂಗಳು ಕಳೆಯುತ್ತಾ ಬಂದಿದೆ. ರಾಜ್ಯದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಸಾಧ್ಯವಾಗಿಲ್ಲ. ನಿನ್ನೆಯಷ್ಟೇ ವರದಿಯಾದ ಹಿಂಸಾಚಾರದಲ್ಲಿ 13 ಜನರು ಪ್ರಾಣ ತೆತ್ತಿದ್ದಾರೆ. ಈ ಹಿಂದೆ ಬ್ಯಾಂಕ್‌ವೊಂದನ್ನು ಲೂಟಿ ಮಾಡಿ ₹18 ಕೋಟಿ ದೋಚಲಾಗಿತ್ತು’ ಎಂದು ಹೇಳಿದ್ದಾರೆ.
‘ಮಣಿಪುರದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ವಾಸ್ತವದ ವರದಿಗಳು ಬೇರೆಯೇ ಹೇಳುತ್ತಿವೆ. ರಾಜ್ಯಕ್ಕೆ ಭೇಟಿ ನೀಡಿ ಅಲ್ಲಿನ ನಾಯಕರನ್ನು ಜೊತೆ ಮಾತುಕತೆ ನಡೆಸುವುದರ ಬಗ್ಗೆ ಪ್ರಧಾನಿಗೆ ಎಳ್ಳಷ್ಟು ಆಸಕ್ತಿಯಿಲ್ಲ ’ ಎಂದರು.
ತೆಂಗನೌಪಾಲ್ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ 13 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.