ನವದೆಹಲಿ: ಸಾರ್ವಜನಿಕ ಚರ್ಚೆಯಲ್ಲಿ ಭಾಗವಹಿಸಲು ಸಿದ್ದ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಿವೃತ್ತ ನ್ಯಾಯಾಧೀಶರು, ಪತ್ರಕರ್ತರ ಆಹ್ವಾನವನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನಾವು ಸಿದ್ದವಾಗಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಭಾಗವಹಿಸಬೇಕೆಂದು ದೇಶದ ಜನತೆ ನಿರೀಕ್ಷಿಸುತ್ತಾರೆ’ ಎಂದು ಹೇಳಿದ್ದಾರೆ.
‘ಪ್ರಮುಖ ರಾಜಕೀಯ ಪಕ್ಷದ ನಾಯಕರು ತಮ್ಮ ದೃಷ್ಟಿಕೋನವನ್ನು ಸಾಮಾನ್ಯ ವೇದಿಕೆಯಲ್ಲಿ ಪ್ರಸ್ತುತಪಡಿಸಲು ಇದು ಸಕಾರಾತ್ಮಕ ಕ್ರಮವಾಗಿದೆ. ಕಾಂಗ್ರೆಸ್ ಆಹ್ವಾನವನ್ನು ಸ್ವೀಕರಿಸಿದ್ದು, ಚರ್ಚೆಯಲ್ಲಿ ಭಾಗವಹಿಸಲು ಸಿದ್ದವಾಗಿದೆ’ ಎಂದರು.
ಪ್ರಮುಖ ಚುನಾವಣಾ ವಿಷಯಗಳ ಕುರಿತು ಚರ್ಚೆಯಲ್ಲಿ ಭಾಗಹಿಸುವಂತೆ ನಿವೃತ್ತ ನ್ಯಾಯಧೀಶರಾದ ಮದನ್ ಬಿ.ಲೋಕೂರ್ ಮತ್ತು ಅಜಿತ್ ಪ.ಶಾ ಮತ್ತಿತ್ತರರು ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾರದ ಹಿಂದೆ ಪತ್ರ ಬರೆದು ಆಹ್ವಾನ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.