ADVERTISEMENT

ಹರಿಯಾಣದಲ್ಲಿ ಅನಿರೀಕ್ಷಿತ ಫಲಿತಾಂಶ; ಕಾಂಗ್ರೆಸ್‌ನಿಂದ ಅವಲೋಕನ: ರಾಹುಲ್ ಗಾಂಧಿ

ಪಿಟಿಐ
Published 9 ಅಕ್ಟೋಬರ್ 2024, 7:22 IST
Last Updated 9 ಅಕ್ಟೋಬರ್ 2024, 7:22 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎದುರಾಗಿರುವ ಅನಿರೀಕ್ಷಿತ ಫಲಿತಾಂಶದ ಕುರಿತು ಕಾಂಗ್ರೆಸ್ ಪಕ್ಷ ಅವಲೋಕನ ನಡೆಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಜಮ್ಮು ಮತ್ತು ಕಾಶ್ಮೀರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು. ರಾಜ್ಯದಲ್ಲಿ 'ಇಂಡಿಯಾ' ಮೈತ್ರಿಕೂಟಕ್ಕೆ ಸಿಕ್ಕಿರುವ ಜನಾದೇಶವು ಸಂವಿಧಾನ, ಪ್ರಜಾಪ್ರಭುತ್ವ, ಸ್ವಾಭಿಮಾನಕ್ಕೆ ಸಂದಿರುವ ಗೆಲುವಾಗಿದೆ' ಎಂದು ಬಣ್ಣಿಸಿದ್ದಾರೆ.

'ನಾವು ಹರಿಯಾಣದ ಅನಿರೀಕ್ಷಿತ ಫಲಿತಾಂಶದ ಕುರಿತಾಗಿಯೂ ಅವಲೋಕನ ನಡೆಸಲಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುತ್ತಿರುವ ದೂರುಗಳ ಬಗ್ಗೆಯೂ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಿದ್ದೇವೆ' ಎಂದು ತಿಳಿಸಿದ್ದಾರೆ.

'ಹರಿಯಾಣದ ಜನತೆಯ ಬೆಂಬಲ, ದವಣಿವರಿಯದೆ ಕೆಲಸ ಮಾಡಿರುವ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

'ಜನರ ಹಕ್ಕುಗಳಿಗಾಗಿ, ಸಾಮಾಜಿಕ, ಆರ್ಥಿಕ ನ್ಯಾಯಕ್ಕಾಗಿ ಮತ್ತು ಸತ್ಯಕ್ಕಾಗಿ ಹೋರಾಟವನ್ನು ಮುಂದುವರಿಸಲಿದ್ದೇವೆ. ನಿಮ್ಮ ಧ್ವನಿಯಾಗಲಿದ್ದೇವೆ' ಎಂದು ಅವರು ತಿಳಿಸಿದ್ದಾರೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಕಾಂಗ್ರೆಸ್‌ 50ಕ್ಕೂ ಹೆಚ್ಚು ಸ್ಥಾನಗಳಿಸಲಿದೆ ಎಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಕಾಂಗ್ರೆಸ್ 37 ಸ್ಥಾನಗಳನ್ನಷ್ಟೇ ಜಯಿಸಿತ್ತು. ಮತ್ತೊಂದೆಡೆ 48 ಸ್ಥಾನಗಳನ್ನು ಗಳಿಸಿರುವ ಬಿಜೆಪಿ, ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ತವಕದಲ್ಲಿದೆ.

ಆದರೆ ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಗೆಲುವನ್ನು ಕಿತ್ತುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.