ADVERTISEMENT

ಕಾಂಗ್ರೆಸ್‌ ಸುಳ್ಳಿನ ಮೂಲಕ ರಾಜ್ಯವನ್ನು ಲೂಟಿ ಮಾಡುತ್ತಿದೆ: ಹರಿಯಾಣ ಸಿಎಂ

ಪಿಟಿಐ
Published 5 ಅಕ್ಟೋಬರ್ 2024, 10:00 IST
Last Updated 5 ಅಕ್ಟೋಬರ್ 2024, 10:00 IST
<div class="paragraphs"><p>ಹರಿಯಾಣ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ</p></div>

ಹರಿಯಾಣ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ

   

ಪಿಟಿಐ

ಚಂಡೀಗಢ: ಸುಳ್ಳಿನ ಮೂಲಕ ಮತದಾರರನ್ನು ವಂಚಿಸಿ ರಾಜ್ಯವನ್ನು ಲೂಟಿ ಮಾಡುವ ನೀತಿಯನ್ನು ಕಾಂಗ್ರೆಸ್‌ ಅನುಸರಿಸುತ್ತಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಆರೋಪಿಸಿದರು.

ADVERTISEMENT

ಅಂಬಲಾ ಜಿಲ್ಲೆಯ ತಮ್ಮ ಗ್ರಾಮವಾದ ಮಿರ್ಜಾದಲ್ಲಿ ಪತ್ನಿಯೊಂದಿಗೆ ಬಂದು ಸೈನಿ ಮತ ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಸುಳ್ಳು ಮತ್ತು ಲೂಟಿಯ ರಾಜಕೀಯವನ್ನು ಮಾಡುತ್ತದೆ. ಹರಿಯಾಣದ ಜನರು ಇದನ್ನು ಅರ್ಥಮಾಡಿಕೊಂಡಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಜನರು ಮನಸ್ಸು ಮಾಡಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್‌ ನಿರಂತರವಾಗಿ ದಲಿತ ಸಮುದಾಯವನ್ನು ಅವಮಾನಿಸುತ್ತಿದೆ. ಅಲ್ಲದೆ, ದಲಿತರ ಉನ್ನತಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿಲ್ಲ. ಹರಿಯಾಣ ಜನರ ನಿಲುವು ಸ್ಪಷ್ಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಮೂರನೇ ಬಾರಿಗೆ ಜನಾದೇಶದೊಂದಿಗೆ ಸರ್ಕಾರ ರಚಿಸಲಿದೆ. 10 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರ ಅತ್ಯುತ್ತಮ ಕಾರ್ಯಗಳನ್ನು ಮಾಡಿದೆ’ ಎಂದು ಅವರು ತಿಳಿಸಿದರು.

90 ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿರುವ ಹರಿಯಾಣದಲ್ಲಿ ಇಂದು (ಶನಿವಾರ) ಮುಂಜಾನೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಅಕ್ಟೋಬರ್‌ 8ರಂದು ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.