ನವದೆಹಲಿ: ಜನವರಿ 5ರಂದು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಗುಂಪು ಹಲ್ಲೆಯ ಹಿಂದೆ ಉಪಕುಲಪತಿ ಜಗದೀಶ್ ಕುಮಾರ್ ಅವರ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಗುಂಪು ಹಲ್ಲೆಯ ನೈಜತೆ ತಿಳಿಯಲು ಸತ್ಯ ಶೋಧನಾ ಸಮಿತಿ ರಚಿಸಿದ್ದ ಕಾಂಗ್ರೆಸ್ ಜಗದೀಶ್ ಕುಮಾರ್ ಅವರನ್ನು ಘಟನೆ ಹಿಂದಿನ ‘ಮಾಸ್ಟರ್ ಮೈಂಡ್’ ಎಂದು ಕರೆದಿದೆ. ದಾಳಿಕೋರರ ಜೊತೆ ಜಗದೀಶ್ ಕುಮಾರ್ ಸಂಚು ರೂಪಿಸಿದ್ದು, ಈ ಕೂಡಲೇ ಅವರನ್ನು ಉಪ ಕುಲಪತಿ ಸ್ಥಾನದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಮುಸುಕುದಾರಿ ದಾಳಿಕೋರರಿಗೆ ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಲು ದೆಹಲಿ ಪೊಲೀಸರು ಅವಕಾಶ ನೀಡಿದ್ದಾರೆ ಎಂದು ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಗಂಭೀರ ಆರೋಪಮಾಡಿದೆ.
ಇದನ್ನೂ ಓದಿ:ಜೆಎನ್‌ಯು ಕುಲಪತಿ ರಾಜೀನಾಮೆಗೆ ಆಗ್ರಹ
ನವದೆಹಲಿಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ಕಳೆದ ಭಾನುವಾರ ಮುಸುಕು ದಾರಿಗಳಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಯು ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.