ನವದೆಹಲಿ: ಮಾಜಿ ಸಚಿವ, ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಬಂಧನವನ್ನು ಕಾಂಗ್ರೆಸ್ ಹೈಕಮಾಂಡ್‌ಖಂಡಿಸಿದೆ.
ಶಿವಕುಮಾರ್ ಅವರ ವಿರುದ್ಧ ಬಿಜೆಪಿ ಕುಟಿಲ, ದ್ವೇಷದ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರದ ದುರಾಡಳಿತವನ್ನು ಮರೆಮಾಚುವ, ಜನರ ಗಮನ ಬೇರೆಡೆ ಸೆಳೆಯುವ ತಂತ್ರವೇ ಡಿಕೆಶಿ ಬಂಧನಎಂದು ಟ್ವೀಟ್ ಮಾಡಿರುವ ಕಾಂಗ್ರೆಸ್ #BJPVendettaPolitics ಎಂಬ ಹ್ಯಾಷ್‌ಟ್ಯಾಗ್ ಅನ್ನು ಬಳಸಿದಿದೆ.
ಇನ್ನು ಬಂಧಿತ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕಚೇರಿಯಿಂದ ಹೊರಗೆ ಕರೆತಂದರು. ಅದಾಗಲೇ ಇ.ಡಿ ಕಚೇರಿಯ ಎದುರು ಜಮಾಯಿಸಿದ್ದ ಬೆಂಬಲಿಗರು ಡಿಕೆಶಿ ಪರ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ತಮ್ಮ ನಾಯಕನನ್ನು ಬಂಧಿಸಿದಂತೆ ಕಣ್ಣೀರಿಟ್ಟು ಬೇಡಿದರು.
ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ
ಬೆಂಗಳೂರು: ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ನವದೆಹಲಿಯಲ್ಲಿ ಬಂಧಿಸುತ್ತಿದ್ದಂತೆ, ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.
ನಗರದ ವಿವಿಧ ಕಡೆ ಮಂಗಳವಾರ ರಾತ್ರಿಯೇ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡರು. ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಾದೇಶಿಕ ಕಚೇರಿಗೂ ಪೊಲೀಸ್ ಸರ್ಪಗಾವಲು ಹಾಕಿದ್ದಾರೆ.
ಈ ಮಧ್ಯೆ, ಆನಂದ ರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಶಿವಕುಮಾರ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬೀದಿಗಿಳಿದು ಪ್ರತಿಭಟನೆ ನಡೆಸುವ ಸಾಧ್ಯತೆ. ಈ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕೇಂದ್ರ ವಲಯದ ಐಜಿಪಿ ಶರತ್ಚಂದ್ರ ಮತ್ತು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.