ಹೈದರಾಬಾದ್: ಕರ್ನಾಟಕ, ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರಗಳು ಭಾರಿ ಹಣಕಾಸಿನ ಮುಗ್ಗಟ್ಟಿನಲ್ಲಿದ್ದು, ಜನರಿಗೆ ನೀಡಿದ ಮಾತು ಉಳಿಸಿಕೊಳ್ಳಲಾಗುತ್ತಿಲ್ಲ. ತೆಲಂಗಾಣದ ಕಾಂಗ್ರೆಸ್ ಸರ್ಕಾರವೂ ಇದೇ ಪರಿಸ್ಥಿತಿಗೆ ತಲುಪಲಿದೆ ಎಂದು ಕೇಂದ್ರ ಸಚಿವರೂ ಆಗಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.
ಹೈದರಾಬಾದ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಮಾಚಲದಲ್ಲಿ ಕಾಂಗ್ರೆಸ್ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಆದರೆ ಈಗ ಅಲ್ಲಿ ನೌಕರರಿಗೆ ಹಾಗೂ ಶಾಸಕರಿಗೆ ವೇತನ ಪಾವತಿ ಮಾಡಲೂ ಹಣವಿಲ್ಲ’ ಎಂದು ಹೇಳಿದ್ದಾರೆ.
‘ಹಿಮಾಚಲ ಹಾಗೂ ಕರ್ನಾಟಕ ಸರ್ಕಾರಗಳು ಹಣಕಾಸಿನ ಮುಗ್ಗಟ್ಟಿನಲ್ಲಿವೆ. ಕರ್ನಾಟಕ ಮುಖ್ಯಮಂತ್ರಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ತೆಲಂಗಾಣದಲ್ಲೂ ಅದೇ ಸ್ಥಿತಿ ಬರಲಿದೆ’ ಎಂದಿದ್ದಾರೆ.
‘ರೇವಂತ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರ ರಾಹುಲ್ ರೇವಂತ್ ತೆರಿಗೆ (RR Tax) ಮೂಲಕ ಜನರ, ಉದ್ಯಮಿಗಳ ಹಾಗೂ ರಿಯಲ್ ಎಸ್ಟೇಟ್ ಕಂಪನಿಗಳನ್ನು ಲೂಟಿ ಮಾಡುತ್ತಿದೆ’ ಎಂದು ಕಿಡಿ ಕಾರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.