ನವದೆಹಲಿ: ಸಂಘರ್ಷ ಪೀಡಿತ ಮಣಿಪುರ ವಿಚಾರವನ್ನು ಸಂಸತ್ತಿನಲ್ಲಿ ’ಇಂಡಿಯಾ’ ಮೈತ್ರಿಕೂಟ ಧ್ವನಿ ಎತ್ತಲಿದೆ. ಈ ಮೂಲಕ ಸರ್ಕಾರದ ಮೇಲೆ ಒತ್ತಡ ಏರಿ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಶಾಂತಿ ನೆಲೆಸಲು ಸಂಪೂರ್ಣವಾಗಿ ಪ್ರಯತ್ನಿಸಲಾಗುವುದು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಮಣಿಪುರಕ್ಕೆ ಭೇಟಿ ನೀಡಿ, ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಬೇಕೆಂದು ಎಂದು ಪುನರುಚ್ಚರಿಸಿದರು.
ಇತ್ತೀಚೆಗೆ ರಾಹುಲ್ ಮಣಿಪುರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರ ಜತೆ ಸಂವಾದ ನಡೆಸಿದ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ, ಶಿಬಿರಗಳಲ್ಲಿ ವಾಸಿಸುತ್ತಿರುವ ಕುಟುಂಬಗಳೊಂದಿಗೆ ಹಾಗೂ ಮೈತೇಯಿ ಹಾಗೂ ಕುಕಿ ಸಮುದಾಯಗಳ ಜನರೊಂದಿಗೂ ಸಂವಾದ ನಡೆಸಿದ್ದಾರೆ.
‘ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿಂದಲೂ ನಾನು ಮೂರು ಬಾರಿ ಭೇಟಿ ನೀಡಿದ್ದಾನೆ. ಆದರೆ ಇಲ್ಲಿನ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಇಂದಿಗೂ ರಾಜ್ಯವು ಎರಡು ಭಾಗವಾದಂತೆ ಕಂಡು ಬಂದಿದೆ. ಇಲ್ಲಿನ ಮನೆಗಳು ಸುಟ್ಟು ಹೋಗಿವೆ. ಅಮಾಯಕ ಜೀವಗಳು ಅಪಾಯದಲ್ಲಿದೆ. ಸಾವಿರಾರೂ ಕುಟುಂಬಗಳು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ‘ ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಅಲ್ಲಿನ ಸಮುದಾಯಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಪರಿಣಾಮಕಾರಿಯಾಗಿ ಮಣಿಪುರ ವಿಚಾರವನ್ನು ಪ‍್ರಸ್ತಾಪಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಘರ್ಷಣೆಯಲ್ಲಿ ಸುಮಾರು 200 ಮಂದಿ ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ
ಕೇಂದ್ರ ಸರ್ಕಾರವು ಇಚ್ಛೆಪಟ್ಟರೆ ಮಣಿಪುರದ ಸಮಸ್ಯೆಯನ್ನು ತಕ್ಷಣದಲ್ಲಿಯೇ ಬಗೆಹರಿಸಬಹುದುರಾಹುಲ್ ಗಾಂಧಿ ಲೋಕಸಭೆಯ ವಿರೋಧ ಪಕ್ಷದ ನಾಯಕ
ನಮ್ಮನ್ನು ನೋಡಲು ಎಲ್ಲರೂ ಬರುತ್ತಿದ್ದಾರೆ. ಆದರೆ ನಮ್ಮ ಮುಖ್ಯಮಂತ್ರಿಯೇ ಬರುತ್ತಿಲ್ಲ. ನಮ್ಮ ಗೃಹ ಮಂತ್ರಿಯೂ ಬರುತ್ತಿಲ್ಲರಾಹುಲ್ ಹಂಚಿಕೊಂಡ ವಿಡಿಯೊದಲ್ಲಿ ಮಾತನಾಡಿರುವ ಮಣಿಪುರದ ಮಹಿಳೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.