ADVERTISEMENT

LS Speaker Election: ಸಂಸದರ ಕಡ್ಡಾಯ ಹಾಜರಾತಿಗೆ ವಿಪ್‌ ಜಾರಿ ಮಾಡಿದ ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2024, 12:57 IST
Last Updated 25 ಜೂನ್ 2024, 12:57 IST
<div class="paragraphs"><p>ಲೋಕಸಭೆ ಅಧಿವೇಶನ&nbsp;</p></div>

ಲೋಕಸಭೆ ಅಧಿವೇಶನ 

   

–ಪಿಟಿಐ ಚಿತ್ರ

ನವದೆಹಲಿ: ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ನಾಳೆ (ಬುಧವಾರ) ಮತದಾನ ನಡೆಯಲಿದ್ದು, ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್‌ ಜಾರಿ ಮಾಡಿದೆ.

ADVERTISEMENT

18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವಾದ ಇಂದು (ಮಂಗಳವಾರ) ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ. ‘ಇಂಡಿಯಾ’ ಮೈತ್ರಿಕೂಟವು ಕೇರಳದ ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್‌ ಸುರೇಶ್ ಅವರನ್ನು ಕಣಕ್ಕಿಳಿಸಿದೆ.

ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭಾ ಸದಸ್ಯರಾಗಿ ಬಿರ್ಲಾ ಆಯ್ಕೆಯಾಗಿದ್ದಾರೆ. ಇತ್ತ ಕೋಡಿಕುನ್ನಿಲ್‌ ಸುರೇಶ್ ಅವರು ಕೇರಳದಿಂದ 7ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.