ಮುಂಬೈ: ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡಿರುವ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಇಂದು (ಭಾನುವಾರ) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಮಿಲಿಂದ್, 'ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಜೊತೆಗಿನ ನನ್ನ ಕುಟುಂಬದ 55 ವರ್ಷಗಳ ಬಾಂಧವ್ಯವನ್ನು ಕೊನೆಗೊಳಿಸಿದ್ದೇನೆ. ನಮ್ಮನ್ನು ಬೆಂಬಲಿಸಿದ ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ.
ಮಾಜಿ ಸಂಸದ ಮಿಲಿಂದ್ ಅವರು ಏಕನಾಥ ಶಿಂದೆ ನೇತೃತ್ವದ ಶಿವಸೇನಾಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್‌ನ ಹಿರಿಯ ನಾಯಕ, ಏಳು ಬಾರಿಯ ಸಂಸದರಾಗಿದ್ದ ಮುರಳಿ ದಿಯೋರಾ ಅವರ ಮಗ. ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಮಿಲಿಂದ್ ಕಾಂಗ್ರೆಸ್ ಜತೆಗೆ ಮುನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಕ್ಷಕ್ಕೆ ಬರುವಂತೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಹಿರಂಗ ಆಹ್ವಾನ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.