ADVERTISEMENT

Bangla Unrest | ರಾಹುಲ್‌–ಜೈಶಂಕರ್‌ ಭೇಟಿ; ಬಾಂಗ್ಲಾದ ಬೆಳವಣಿಗೆಗಳ ಬಗ್ಗೆ ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಆಗಸ್ಟ್ 2024, 15:30 IST
Last Updated 5 ಆಗಸ್ಟ್ 2024, 15:30 IST
<div class="paragraphs"><p>ರಾಹುಲ್‌ ಗಾಂಧಿ</p></div>

ರಾಹುಲ್‌ ಗಾಂಧಿ

   

-ಪಿಟಿಐ ಚಿತ್ರ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಅವರನ್ನು ಭೇಟಿಯಾಗಿ ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್‌ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ.

ಬಾಂಗ್ಲಾ ಗಡಿಯಲ್ಲಿ ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಈಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತ-ಢಾಕಾ ನಡುವೆ ಸಂಚರಿಸುವ ಮೈತ್ರಿ ಎಕ್ಸ್‌ಪ್ರೆಸ್‌ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಬಾಂಗ್ಲಾದಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಎರಡು ವಾರಕ್ಕೊಮ್ಮೆ ಸಂಚರಿಸುವ ಕೋಲ್ಕತ್ತ-ಖುಲ್ನಾ-ಕೋಲ್ಕತ್ತ ಬಂಧನ್ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.