ನವದೆಹಲಿ: ‘ಅಮರ್ ಜವಾನ್’ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ಸೂಚಿಸಿದ್ದಾರೆ.
‘ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿ ಇಂದು ಆರುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪರವಾಗಿಲ್ಲ, ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿ ಬೆಳಗಿಸುತ್ತೇವೆ!’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ 50 ವರ್ಷಗಳಿಂದ ಜ್ವಲಿಸುತ್ತಿದ್ದ ಅಮರ್ ಜವಾನ್ ಜ್ಯೋತಿಯನ್ನು ಸಮೀಪದ ಯುದ್ಧ ಸ್ಮಾರಕದಲ್ಲಿರುವ ಅಮರ್ ಚಕ್ರದಲ್ಲಿರುವ ಜ್ಯೋತಿಯೊಂದಿಗೆ ವಿಲೀನಗೊಳಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜ್ಯೋತಿಯನ್ನು ಆರಿಸುತ್ತಿಲ್ಲ, ಬದಲಿಗೆ ವಿಲೀನಗೊಳಿಸಲಾಗುತ್ತಿದೆ ಎಂಬ ಸ್ಪಷ್ಟೀಕರಣವನ್ನೂ ಸರ್ಕಾರ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.