ADVERTISEMENT

ವಾಜಪೇಯಿ ಸಮಾಧಿ ಸ್ಥಳಕ್ಕೆ ತೆರಳಿ ಗೌರವ ಸಲ್ಲಿಸಿದ ರಾಹುಲ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಡಿಸೆಂಬರ್ 2022, 7:51 IST
Last Updated 26 ಡಿಸೆಂಬರ್ 2022, 7:51 IST
   

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಜಿ ಪ‍್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ.

ಇದೇ ವೇಳೆ ಅವರುರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ ಅವರ ಸ್ಮಾರಕಗಳಿಗೂ ಗೌರವ ಅರ್ಪಿಸಿದ್ದಾರೆ.

ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ಭಾರತ್‌ ಜೋಡೊ ಯಾತ್ರೆಗೂ ಮುನ್ನರಾಹುಲ್ ಗಾಂಧಿ ಅವರು ಜವಾಹರಲಾಲ್‌ ನೆಹರೂ, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ, ಚರಣ್‌ ಸಿಂಗ್‌, ಚರಣ್‌ ಸಿಂಗ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಜಗಜೀವನ್‌ ರಾಮ್‌ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು ಎಂದು ತಿಳಿಸಿದ್ದಾರೆ.

ರಾಹುಲ್‌ ಶನಿವಾರವೇ ಈ ಸ್ಮಾರಕ ಗಳಿಗೆ ಭೇಟಿ ನೀಡಬೇಕಿತ್ತು. ಭಾರತ್ ಜೋಡೊ ಯಾತ್ರೆ ತಡವಾಗಿ ಮುಕ್ತಾಯವಾಗಿದ್ದರಿಂದ ಸಾಧ್ಯವಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.