ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 31ರಂದು ಅಮೆರಿಕಕ್ಕೆ 10 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 4ರಂದು ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಅನಿವಾಸಿ ಭಾರತೀಯರೊಂದಿಗೆ ರ‍್ಯಾಲಿ ನಡೆಸಲಿದ್ದಾರೆ.
ಬಳಿಕ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಚರ್ಚೆ ನಡೆಸಲಿದ್ದಾರೆ. ಜತೆಗೆ, ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ ವಿವಿಧ ಸಭೆಗಳಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ. ಇದೇ ವೇಳೆ ರಾಜಕಾರಣಿಗಳು ಸೇರಿದಂತೆ ಉದ್ಯಮಿಗಳೊಂದಿಗೂ ರಾಹುಲ್ ಮಾತುಕತೆ ನಡೆಸಲಿದ್ದಾರೆ.
ಇತ್ತೀಚೆಗೆ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್, ‘ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಹೇಳಿಕೆ ನೀಡಿದ್ದರು. ರಾಹುಲ್ ಹೇಳಿಕೆ ಖಂಡಿಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ಸಂಸತ್‌ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.
ಜೂನ್ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ್ಕೆ ಭೇಟಿ ನೀಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.