ಕೊಚ್ಚಿ: ‘ಕಪಿಲ್ ಸಿಬಲ್ ಅವರು ಪಕ್ಷ ತೊರೆದಿದ್ದರಿಂದ ಯಾವುದೇ ನಷ್ಟವುಂಟಾಗುವುದಿಲ್ಲ. ರಾಷ್ಟ್ರದ ರಾಜಕೀಯದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿದೆ. ವಿವಿಧ ರಾಜ್ಯಗಳಲ್ಲಿ ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರುವ ಅನೇಕ ನಾಯಕರ ಮೇಲೆ ಇದೇನೂ ಪರಿಣಾಮ ಬೀರುವುದಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.
‘ಸಿಬಲ್ ಅವರು ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಏನನ್ನೂ ಹೇಳಿಲ್ಲ, ಪಕ್ಷದಲ್ಲಿ ಅವಕಾಶ ಕಲ್ಪಿಸಲು ಯಾವುದೇ ಸ್ಥಾನಗಳಿಲ್ಲದ ಕಾರಣ ಸಿಬಲ್ ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ಕಾಂಗ್ರೆಸ್ ತೊರೆದಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಓದಿ...ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ಎಸ್ಪಿ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.