ADVERTISEMENT

ಚನ್ನಿ ಸಿಎಂ ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ತಪ್ಪು ಮಾಡಿದೆ: ಅಮರಿಂದರ್

ಪಿಟಿಐ
Published 9 ಫೆಬ್ರುವರಿ 2022, 5:55 IST
Last Updated 9 ಫೆಬ್ರುವರಿ 2022, 5:55 IST
ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್   

ಪಟಿಯಾಲ: ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ಪಕ್ಷವು ಅತಿ ದೊಡ್ಡ ತಪ್ಪು ಮಾಡಿದೆ ಎಂದು ಮಾಜಿ ಸಿಎಂ, ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರಿಂದರ್ ಸಿಂಗ್ ಆರೋಪ ಮಾಡಿದ್ದಾರೆ.

ಪಂಜಾಬ್ ಹಿಂದೆಂದೂ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿಭಜನೆಯಾಗಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ. ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಸಿಎಂ ಆಗಿದ್ದ 111 ದಿನಗಳಲ್ಲಿ ಎಲ್ಲವನ್ನೂ ಮಾಡಿದ್ದೇನೆ ಎಂದು ಚನ್ನಿ ಹೇಳಿಕೊಂಡಿದ್ದಾರೆ. ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಪ್ರತಿಯೊಂದು ಯೋಜನೆಯನ್ನು ಪ್ರಾರಂಭಿಸಲು ತಿಂಗಳುಗಳು ಬೇಕಾಗುತ್ತದೆ. ಈ ಕುರಿತು ಜನರು ಎಚ್ಚರವಾಗಿರಬೇಕು. ಚನ್ನಿ ಹೇಳಿರುವ ಎಲ್ಲ ಯೋಜನೆಗಳು ನಮ್ಮ ಸರ್ಕಾರದಿಂದ ಆರಂಭವಾಗಿತ್ತು ಎಂದು ಹೇಳಿದರು.

ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಆದರೆ ಜಾತಿ ಆಧಾರದಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಬಾರದು. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸದ್ಯದಲ್ಲೇ ಬಂಡಾಯ ಏಳುವುದಾಗಿ ಎಚ್ಚರಿಸಿದರು.

ಪಂಜಾಬ್‌ನ ಉತ್ತಮ ಭವಿಷ್ಯಕ್ಕಾಗಿ ತಮ್ಮ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.