ADVERTISEMENT

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2024, 16:13 IST
Last Updated 25 ಜೂನ್ 2024, 16:13 IST
   

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

2014 ಮತ್ತು 2019ರ ಲೋಕಸಭೆಯಲ್ಲಿ ಕ್ರಮವಾಗಿ ಕಾಂಗ್ರೆಸ್ 44 ಮತ್ತು 52 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ವಿರೋಧ ಪಕ್ಷಗಳ ಸ್ಥಾನಮಾನಕ್ಕೆ ಕನಿಷ್ಠ 54 ಸ್ಥಾನಗಳ ಅಗತ್ಯವಿದೆ. ಈ ಬಾರಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಇದರ ಜೊತೆಗೆ ಇಂಡಿಯಾ ಬಣದ ಪಕ್ಷಗಳ ಬೆಂಬಲ ಸಹ ಕಾಂಗ್ರೆಸ್

ಕಾಂಗ್ರೆಸ್‌ನ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರು ಈ ಸಂಬಂಧ ಲೋಕಸಭಾ ಹಂಗಾಮಿ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ADVERTISEMENT

ವಿರೋಧ ಪಕ್ಷಗಳ ‘ಇಂಡಿಯಾ’ ಬಣದ ಪಕ್ಷಗಳ ಸದನದ ನಾಯಜರ ಸಭೆಯಲ್ಲಿಯೂ ಈ ವಿಚಾರ ಚರ್ಚಿಸಲಾಗಿದ್ದು, ಬಣದ ಎಲ್ಲ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.