ಶ್ರೀನಗರ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವುದಕ್ಕೆ ಅಸಲಿ ಕಾರಣಗಳೇನು ಎಂಬುವುದನ್ನು ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಟ್ಟೆ ಸಮೀಕ್ಷೆಗಳ ಮೇಲೆ ನಂಬಿಕೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಈ ಹಿಂದೆಯೂ ಹೇಳಿದ್ದೆ. ಆದರೆ ಎಕ್ಸಿಟ್ ಪೋಲ್‌ಗಳ ಮಾಹಿತಿ ಇಷ್ಟು ಅಂತರದಲ್ಲಿ ಸುಳ್ಳಾಗುತ್ತದೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ತಿಳಿಸಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿದ್ದವು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿ ಗೆಲುವು ಸಾಧಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷಸ್ಥಾನಮಾನವನ್ನು ಹಿಂಪಡೆದ ಮೇಲೆ ಮೊದಲ ಬಾರಿಗೆ ಸರ್ಕಾರ ರಚಿಸಲು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚಿಸಲು ಸಿದ್ಧತೆ ನಡೆಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.