ADVERTISEMENT

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಅಸ್ಸಾಂ ಸಿಎಂ

ಪಿಟಿಐ
Published 8 ನವೆಂಬರ್ 2024, 13:21 IST
Last Updated 8 ನವೆಂಬರ್ 2024, 13:21 IST
<div class="paragraphs"><p>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ</p></div>

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ

   

ರಾಂಚಿ: ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅಂತಹ ಪ್ರಯತ್ನಗಳನ್ನು ವಿಫಲಗೊಳಿಸಲು ಜನ ಒಗ್ಗಟ್ಟಿನಿಂದ ಇರಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕರೆ ನೀಡಿದ್ದಾರೆ.

ಜಾರ್ಖಂಡ್‌ನ ಬಿಜೆಪಿಯ ಚುನಾವಣಾ ಸಹ- ಉಸ್ತುವಾರಿಯೂ ಆಗಿರುವ ಶರ್ಮಾ ಅವರು, ಶುಕ್ರವಾರ ರಾಂಚಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದರು.

ADVERTISEMENT

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಬಯಸಿದೆ. ಏಕ್ ರಹೋಗೆ ತೋ ಸೇಫ್ ರಹೋಗೆ' (ಒಗ್ಗಟ್ಟಿನಿಂದ ಇದ್ದರೆ ನೀವು ಸುರಕ್ಷಿತವಾಗಿರುತ್ತೀರಿ) ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಒಳನುಸುಳುವಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ರಾಜ್ಯದ ಮಹಿಳೆಯರಿಗೆ ಅಪಾಯ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.