ಸಿಧಿ( ಮಧ್ಯಪ್ರದೇಶ): ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ದೇಶದ ಮೊದಲ ರಾಷ್ಟ್ರಪತಿಯಾಗಿ ಸ್ಪರ್ಧಿಸಿದ್ದ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ವಿರೋಧಿಸಿತ್ತು. ಕಾಂಗ್ರೆಸ್ ಪಕ್ಷದವರು ನನ್ನನ್ನು ನಿಂದಿಸುವುದನ್ನು ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಮಧ್ಯಪ್ರದೇಶದ ಚುನಾವಣೆಯ ರ್‍ಯಾಲಿಯನ್ನು ಉದ್ದೇಶಿಸಿ ಸಿಧಿ ಜಿಲ್ಲೆಯಲ್ಲಿ ಮಾತನಾಡಿದ ಅವರು‘ ಕೇವಲ ವೋಟ್ ಬ್ಯಾಂಕ್ ರಾಜಕರಣಕ್ಕಾಗಿ ಮಾತ್ರ ಬುಡಕಟ್ಟು ಜನಾಂಗದವರ ಬಗ್ಗೆ ಕಾಳಜಿ ಹೊಂದಿರುವ ಕಾಂಗ್ರೆಸ್ ಪಕ್ಷದವರು, ಅದೇ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಗೈರಾಗಿದ್ದರು' ಎಂದು ವಾಗ್ದಾಳಿ ನಡೆಸಿದರು.
ಹಿಂದಿನ ಸರ್ಕಾರದಲ್ಲಿ ನಡೆಯುತ್ತಿದ್ದ ಅನೇಕ ಹಗರಣಗಳನ್ನು ತಡೆಗಟ್ಟಿ, ಆ ಹಣವನ್ನೇ ಬಡವರ ಕಲ್ಯಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರು.
‘ನಮ್ಮ ಸರ್ಕಾರದ ಅವಧಿಯಲ್ಲಿ ‘ಪಿಎಂ ವಿಶ್ವಕರ್ಮ‘ ಯೋಜನೆಯ ಮೂಲಕ ಕುಶಲಕರ್ಮಿಗಳಿಗೆ ಸುಮಾರು ₹13000 ಕೋಟಿ ಮೀಸಲಿಡಲಾಗಿದೆ ಹಾಗೂ ರಾಜ್ಯದ ವಿಂಧ್ಯಾ ಪ್ರದೇಶದಲ್ಲಿ ದೇಶದ ಪ್ರಮುಖ ಸೌರ ವಿದ್ಯುತ್ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ‘ ಎಂದು ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.