ADVERTISEMENT

ಲೋಕಸಭೆ-ವಿಧಾನಸಭೆ ಕಳಪೆ ಸಾಧನೆ | ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ವಿಸರ್ಜನೆ

ಪಿಟಿಐ
Published 21 ಜುಲೈ 2024, 12:58 IST
Last Updated 21 ಜುಲೈ 2024, 12:58 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ಬೆಂಗಳೂರು: ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು (ಒಪಿಸಿಸಿ) ಕಾಂಗ್ರೆಸ್ ಪಕ್ಷ ಇಂದು ವಿಸರ್ಜಿಸಿದೆ.

ಇತ್ತೀಚೆಗೆ ನಡೆದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ರಮ ಕೈಗೊಂಡಿದ್ದಾರೆ.

ADVERTISEMENT

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಪಿಸಿಸಿ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ಜಿಲ್ಲೆ, ಬ್ಲಾಕ್, ಮಂಡಲ ಸಮಿತಿಗಳನ್ನು ವಿಸರ್ಜಿಸುವ ಪ್ರಸ್ತಾಪವನ್ನು ಖರ್ಗೆ ಅನುಮೋದಿಸಿದ್ದಾರೆ.

ನೂತನ ಡಿಸಿಸಿ ಅಧ್ಯಕ್ಷರ ನೇಮಕವಾಗುವವರೆಗೂ ಡಿಸಿಸಿ ಅಧ್ಯಕ್ಷರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಶರತ್ ಪಟ್ಟನಾಯಕ್ ಅವರು ಈಗಿನ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.