ADVERTISEMENT

ಅರುಣಾಚಲಪ್ರದೇಶ ವಿಧಾನಸಭೆ ಚುನಾವಣೆ:34 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2024, 10:03 IST
Last Updated 21 ಮಾರ್ಚ್ 2024, 10:03 IST
   

ಇಟಾನಗರ: ಅರುಣಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 34 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸನ್ಹೆಯ್ ಫುನ್‌ಸೋಕ್, ಕೊಂಪು ಡೋಲೊ, ಒಕ್ರಂ ಯೋಸಂಗ್, ಟೋಬಿಂಗ್ ಲೆಗೊ ಸೇರಿದಂತೆ ಪ್ರಮುಖ ನಾಯಕರ ಹೆಸರುಗಳು ಪಟ್ಟಿಯಲ್ಲಿವೆ.

ಅರುಣಾ ಪ್ರದೇಶದಲ್ಲಿ 60 ವಿಧಾನಸಭಾ ಕ್ಷೇತ್ರಗಳಿದ್ದು, ಏಪ್ರಿಲ್ 19ರಂದು ಲೋಕಸಭಾ ಮತ್ತು ವಿಧಾನಸಭೆಗೆ ಒಟ್ಟೊಟ್ಟಿಗೆ ಚುನಾವಣೆ ನಡೆಯಲಿದೆ.

ಇದಕ್ಕೂ ಮುನ್ನ, ಬಿಜೆಪಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವ ಕಿರಣ್ ರಿಜಿಜು, ಪೂರ್ವಕ್ಕೆ ತಪಿರ್ ಗಾವ್ ಅವರನ್ನು ಬಿಜೆಪಿ ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ.

ADVERTISEMENT

ಮಾರ್ಚ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 30 ಕೊನೆಯ ದಿನವಾಗಿದೆ. ಹಾಲಿ ವಿಧಾನಸಭೆಯ ಅವಧಿ ಜೂನ್ 2ಕ್ಕೆ ಅಂತ್ಯವಾಗಲಿದೆ.

4,49,050 ಮಂದಿ ಮಹಿಳಾ ಮತದಾರರು ಸೇರಿ ಅರುಣಾಚಲಪ್ರದೇಶದಲ್ಲಿ ಒಟ್ಟು 8,86,848 ಮಂದಿ ಮತದಾರರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.