ನವದೆಹಲಿ: ಅದಾನಿ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ಪುಸ್ತಕವನ್ನು ಬಿಡುಗಡೆಗೊಳಿಸಿದೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಸುದ್ದಿಗೋಷ್ಠಿಯಲ್ಲಿ ಪುಸ್ತಕ ಬಿಡುಗಡೆ ಮಾಡಿದ್ದಾರೆ.
ಈ ಹಿಂದೆಯೂ ಸಂಸತ್ತಿನಲ್ಲಿ ಅದಾನಿ ಪ್ರಕರಣದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ನಾವು ಒತ್ತಾಯಿಸಿದ್ದೇವೆ. ಈಗ ಹೊಸ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಜೆಪಿಸಿ ತನಿಖೆಗೆ ಒತ್ತಾಯಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಜೂನ್ 12ರಂದು ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ನಾವು ಭಾಗವಹಿಸಲಿದ್ದೇವೆ. ಆದರೆ ಕಾಂಗ್ರೆಸ್‌ನಿಂದ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತೊಂದೆಡೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ದೊಡ್ಡ ಉದ್ಯಮಗಳಿಗೆ ವಿನಾಯಿತಿ ನೀಡಬಹುದು. ಅವರ ಸಾಲವನ್ನು ಮನ್ನಾ ಮಾಡಬಹುದು. ಆದರೆ ಬಡವರಿಗೆ ನಾವು ಸಹಾಯ ಮಾಡಲು ಪ್ರಯತ್ನಿಸಿದಾಗ ಅದನ್ನು ಗೇಲಿ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.