ನವದೆಹಲಿ:ಅರ್ಥಶಾಸ್ತ್ರ ನೊಬೆಲ್ ಪುರಸ್ಕೃತಅಭಿಜಿತ್ ಬ್ಯಾನರ್ಜಿ ಅವರನ್ನು ಟೀಕಿಸಿದ್ದಕ್ಕೆಕೇಂದ್ರ ಸಚಿವ ಪೀಯೂಷ್ ಗೋಯಲ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಗೋಯಲ್ ಹೇಳಿಕೆಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಟ್ವೀಟ್ ಮಾಡಿದ್ದು, ‘ಚುನಾವಣಾ ಗೆಲುವು ನೊಬೆಲ್ ಪುರಸ್ಕೃತರ ಅಭಿಪ್ರಾಯವನ್ನೇ ತಪ್ಪಾಗಿ ಮಾಡುತ್ತದೆ ಎಂದರೆ, ಬಹಶಃ ಅಜ್ಞಾನವಿರಬಹುದು. ಬಿಜೆಪಿ ಅಧಿಕಾರಕ್ಕೆ ಮರಳಿದ ಕಾರಣ ಕೆಟ್ಟದಾಗಿದೆ. ಅದು ಅಹಂಕಾರದಿಂದ ಅಧಿಕಾರಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.
ಶುಕ್ರವಾರ ಪುಣೆಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಗೋಯಲ್, ‘ಅಭಿಜಿತ್ ಅವರು ಕಾಂಗ್ರೆಸ್‌ನ ನ್ಯಾಯ್ (ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಪ್ರಕಟಿಸಿದ್ದ ಬಡತನ ನಿರ್ಮೂಲನೆ ಯೋಜನೆ) ಅನ್ನು ಬೆಂಬಲಿಸಿದ್ದರು. ಆದರೆ, ಭಾರತದ ಜನರು ಅವರ ಸಿದ್ಧಾಂತವನ್ನು ತಿರಸ್ಕರಿಸಿದ್ದಾರೆ’ ಎಂದು ಹೇಳಿದ್ದರು.
ಈ ಹೇಳಿಕೆಗೆ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.ಅಭಿಜಿತ್ ಅವರು ಕಾಂಗ್ರೆಸ್ ಪಕ್ಷದ ನ್ಯಾಯ್ ಅನ್ನು ಬೆಂಬಲಿಸಿದ್ದಾರೆ ಎಂಬ ಕಾರಣಕ್ಕೆ ನೊಬೆಲ್ ಪುರಸ್ಕಾರಕ್ಕೆ ಪಾತ್ರರಾದ ಅವರ ಸಾಧನೆಯ ಹೊಳಪು ಮಸುಕಾಗುತ್ತದೆಯೇ ಎಂದು ಕಾಂಗ್ರೆಸ್ ಮುಖಂಡ ಪ್ರದೀಪ್ ಭಟ್ಟಾಚಾರ್ಯ ಪ್ರಶ್ನಿಸಿದ್ದರು.
ಕಾಂಗ್ರೆಸ್‌ನ ನ್ಯಾಯ್ ಯೋಜನೆಯ ಪರಿಕಲ್ಪನೆ ರೂಪಿಸುವಲ್ಲಿ ಅಭಿಜಿತ್ ಅವರು ನೆರವಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.