ADVERTISEMENT

3 ರಾಜ್ಯಗಳಲ್ಲಿ ಸಿಎಂ ಆಯ್ಕೆ ವಿಳಂಬ; ಬಿಜೆಪಿ ಪ್ರಶ್ನೆ ಮಾಡಿದ ಕಾಂಗ್ರೆಸ್

ಪಿಟಿಐ
Published 7 ಡಿಸೆಂಬರ್ 2023, 6:15 IST
Last Updated 7 ಡಿಸೆಂಬರ್ 2023, 6:15 IST
<div class="paragraphs"><p>ಜೈರಾಮ್ ರಮೇಶ್</p></div>

ಜೈರಾಮ್ ರಮೇಶ್

   

(ಪಿಟಿಐ ಚಿತ್ರ)

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ಪಕ್ಷವು ನೂತನ ಮುಖ್ಯಮಂತ್ರಿ ಆಯ್ಕೆಯಲ್ಲಿ ಏಕೆ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದಾರೆ.

ಡಿಸೆಂಬರ್ 3ರಂದು ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ 24 ತಾಸಿನ ಬಳಿಕ ಎಲ್ಲರೂ ತೆಲಂಗಾಣದಲ್ಲಿ ಸಿಎಂ ಆಯ್ಕೆ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಮಾಧ್ಯಮಗಳಲ್ಲಿ ಟೀಕಿಸಿದರು. ಆದರೆ ನಮ್ಮ ಮುಖ್ಯಮಂತ್ರಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದು, ಇಂದು ಮಧ್ಯಾಹ್ನ (ಗುರುವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಜೈರಾಮ್ ತಿಳಿಸಿದ್ದಾರೆ.

ಆದರೆ ಮೂರು ದಿನಗಳು ಕಳೆದರೂ ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮುಖ್ಯಮಂತ್ರಿಯನ್ನು ಘೋಷಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ನಿಜವಾಗಿಯೂ ಬಿಜೆಪಿ ಸಿಎಂ ಆಯ್ಕೆ ಮಾಡಲು ವಿಳಂಬವಾಗಲು ಕಾರಣ ಏನು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.